ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರು ಅರ್ಜಿ ಸಲ್ಲಿಸಲು ಆಗಸ್ಟ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿದೆ. ಹೈಲೈಟ್ಸ್‌: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ. ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ. ಸುವಿಧಾ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರು ಅರ್ಜಿ ಸಲ್ಲಿಸಲು ಆಗಸ್ಟ್ 31ರವರೆಗೆ ಅವಧಿ ವಿಸ್ತರಿಸಲಾಗಿದೆ. ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್‍ಬುಕ್ ಪ್ರತಿ, ವಾಹನವಾಗಿದ್ದಲ್ಲಿ ಡ್ರೈವಿಂಗ್ ಲೈಸನ್ಸ್, ಗಂಗಾ ಕಲ್ಯಾಣ ಯೋಜನೆಗೆ ಜಮೀನಿನ ಪಹಣಿ ಮತ್ತು ಸಣ್ಣ , ಅತಿ ಸಣ್ಣ ಹಿಡುವಳಿದಾರರ ದೃಢೀಕರಣ ಪತ್ರಗಳೊಂದಿಗೆ ದಿನಾಂಕ 31-08-2022 ರೊಳಗಾಗಿ https://suvidha.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು.